
ರಾಜ್ಯ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ್ ಪಾಟೀಲ್ ರವರು ಬೆಂಗಳೂರು ನಗರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಇದೇ 11ರಿಂದ 12ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದು, ಯುವಜನ ಸೇವೆ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಸುಮಾರು 2ಸಾವಿರಕ್ಕೂ ಅಧಿಕ ಖಾಯಂ ಸರ್ಕಾರಿ ನೌಕರ ಕ್ರೀಡಾಪಟುಗಳು ಭಾಗವಹಿಸಲಿದ್ದು ಈ ಹಿನ್ನಲೆಯಲ್ಲಿ. ಬೆಂಗಳೂರು ನಗರ ಸರ್ಕಾರಿ ನೌಕರರಿಗೆ ರಜೆ ನೀಡುವ ವ್ಯವಸ್ಥೆ ಕೈಗೊಳ್ಳಲಾಗಿದೆ, ಎಲ್ಲ ಜಿಲ್ಲೆಗಳಲ್ಲಿ ಕ್ರೀಡಾ ಕೂಟ ನಡೆಯುತ್ತಿದ್ದು, ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಭಾಗವಹಿಸುವವರಿಗೆ ಎರಡು ದಿನಗಳ ಸಾಂದರ್ಭಿಕ, ಹಾಗೂ ರಾಜ್ಯ ಮಟ್ಟದ ಭಾಗವಹಿಸುವ ವರಿಗೆ ಮೂರು ದಿನಗಳ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ.ಎಂದು ತಿಳಿಸಿದರು.

ಪುಟ್ಬಾಲ್, ವಾಲಿಬಾಲ್, ಹಾಕಿ, ಕಬ್ಬಡಿ, ಟೆನ್ನಿಸ್ , ಬ್ಯಾಡ್ಮಿಂಟನ್, ಕೇರಂ, ಕ್ರಿಕೆಟ್, ಬ್ಯಾಸ್ಕೆಟ್ಬಾಲ್, ಚೆಸ್,ಥ್ರೋಬಾಲ್ ಮತ್ತು ಬಾಲ್ ಬ್ಯಾಡ್ಮಿಂಟನ್ ಕ್ರೀಡೆಗಳು ಎಲ್ಲಾ ಜಿಲ್ಲೆಗಳಲ್ಲೂ ನಡೆಯಲಿದೆ ಎಂದು ತಿಳಿಸಿದರು.
City Today News
9341997936