Ajit Singh : ಮಾಜಿ ಕೇಂದ್ರ ಸಚಿವ ಕೊರೋನಾಗೆ ಬಲಿ..!

ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದ ಮಾಜಿ ಕೇಂದ್ರ ಸಚಿವ ಮತ್ತು ರಾಷ್ಟ್ರೀಯ ಲೋಕ ದಳದ ಮುಖ್ಯಸ್ಥ ಚೌಧರಿ ಅಜಿತ್ ಸಿಂಗ್ (82) ಅವರು ಕೋವಿಡ್ -19 ನಿಂದ  ಸಾವನ್ನಪ್ಪಿದ್ದಾರೆ.

ಕೊರೋನಾ ಕಾರಣ ಅಜಿತ್ ಸಿಂಗ್(Ajit Singh) ಅವರನ್ನು ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ನಿಧನರಾಗಿದ್ದಾರೆ. ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಪುತ್ರರಾದ ಚೌಧರಿ ಅಜಿತ್ ಸಿಂಗ್ ಭಾಗಪತ್ ಮತ ಕ್ಷೇತ್ರದಿಂದ 7 ಬಾರಿ ಸಂಸದರಾಗಿದ್ದರು.

ಶ್ವಾಸಕೋಶದ ಸೋಂಕಿನಿಂದ ಮಂಗಳವಾರ ರಾತ್ರಿ ಅವರ ಸ್ಥಿತಿ ಗಂಭೀರವಾಗಿತ್ತು, ಚಿಕಿತ್ಸೆ(Treatment) ಫಲಕಾರಿಯಾಗದೆ ಅವರು ಇಂದು ನಿಧನರಾಗಿದ್ದಾರೆ.

ಇದನ್ನೂ ಓದಿ : LIC ಗ್ರಾಹಕರೇ ಗಮನಿಸಿ, ಮೇ 10ರಿಂದ ಬದಲಾಗಲಿದೆ ಈ ನಿಯಮ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್(Manmohan Singh) ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಅವರ ಸಂಪುಟದಲ್ಲಿ ಅಜಿತ್ ಸಿಂಗ್ ನಾಗರಿಕ ವಿಮಾನಯಾನ ಸಚಿವರಾಗಿ ಕೆಲಸ ಮಾಡಿದ್ದಾರೆ. 1979 -80ರಲ್ಲಿ ರಾಜಕೀಯ ಕ್ಷೇತ್ರ ಪ್ರವೇಶಿಸುವ ಮೊದಲು ಅವರು ಅಮೆರಿಕದಲ್ಲಿ ಕಂಪ್ಯೂಟರ್ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ…
Android Link – https://bit.ly/3hDyh4G
Apple Link – https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More | https://zeenews.india.com/kannada

Leave a Reply

Your email address will not be published. Required fields are marked *