
ಇಡೀ ದೇಶವೇ ಲೋಕಸಭಾ ಚುನಾವಣೆಯತ್ತ ಮುಖ ಮಾಡಿದೆ. ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾ (ಅಠವಳೆ) ಪಕ್ಷವೂ ಸಹ ದೇಶದ 31 ರಾಜ್ಯಗಳಲ್ಲೂ ಈ ಚುನಾವಣೆಗೆ ಸಿದ್ಧತೆ ನಡೆಸಿದೆ. ನಮ್ಮ ಪಕ್ಷದ ಕರ್ನಾಟಕ ರಾಜ್ಯ ಘಟಕವೂ ಸಹ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದವಾಗಿದೆ. ಈ ಪೂರಕವಾಗಿ ದಿನಾಂಕ 17.02.2024ರ ಶನಿವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ನಮ್ಮ ರಾಜ್ಯದ 31 ಜಿಲ್ಲೆಗಳಲ್ಲಿನ ಸಮಸ್ತ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶವನ್ನು ಅಯೋಜಿಸಲಾಗಿದೆ. ಕೇಂದ್ರ ಸಚಿವರು ಮತ್ತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ರಾಂದಾಸ್ ಅಠವಳೆ ಅವರು ಈ ಸಮಾವೇಶವನ್ನು ಉದ್ಘಾಟಿಸುವರು. ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಾ.ಎಂ.ವೆಂಕಟಸ್ವಾಮಿ ಅವರು ಸಮಾವೇಶದ ಅಧ್ಯಕ್ಷತೆ ವಹಿಸುವರು. ಎನ್.ಡಿ.ಎ.ಮೈತ್ರಿ ಪಕ್ಷಗಳ ಮುಖಂಡರನ್ನೂ ಸಹ ಈ ಸಮಾವೇಶದ ಮುಖ್ಯ ಅತಿಥಿಗಳಾಗಿ ಅಹ್ವಾನಿಸಲಾಗುವುದು. ಎನ್.ಡಿ.ಎ.ಮೈತ್ರಿ ಪಕ್ಷವಾಗಿ ಆರ್.ಪಿ.ಐ.ಸ್ಪರ್ಧಿಸಲಿದೆ. ಕೋಲಾರ ಮತ್ತು ವಿಜಯಪುರ ಲೋಕಸಭಾ ಕ್ಷೇತ್ರಗಳನ್ನು ನಮ್ಮ ಪಕ್ಷಕ್ಕೆ ಬಿಟ್ಟುಕೊಡುವ ಪ್ರಸ್ತಾಪವನ್ನು ಎನ್.ಡಿ.ಎ. ಮುಖ್ಯಸ್ಥರಿಗೆ ಸಲ್ಲಿಸಲಾಗುವುದು. ಈ ಪೂರಕ ನಿರ್ಣಯವನ್ನು ಫೆಬ್ರವರಿ17ರ ಸಮಾವೇಶದಲ್ಲಿ ಕೈಗೊಳ್ಳಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಬೇಕೆಂದು ಈ ಮೂಲಕ ರಾಜ್ಯ ಸಮಿತಿಯು ಮನವಿ ಮಾಡುತ್ತದೆ ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ಆರ್. ಪಿ. ಐ ವತಿಯಿಂದ ತಿಳಿಸಲಾಯಿತು.
City Today News 9341997936